ಸಮಗ್ರ ನ್ಯೂಸ್: ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿರುವ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಬಳಿ ತೆರಳದಂತೆ ಕಡಬ ತಹಶೀಲ್ದಾರ್ ರಮೇಶ್ ಬಾಬು ಸೂಚನೆ ನೀಡಿದ್ದಾರೆ.
ಕಡಬ ತಾಲೂಕಿನಾದ್ಯಂತ ಕಳೆದ 2 ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ ಗ್ರಾಮದ ಸುಬ್ರಹ್ಮಣ್ಯ ಸ್ನಾನಘಟ್ಟದಲ್ಲಿ ಕುಮಾರಧಾರ ನದಿಯು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತಾದಿಗಳು ಹಾಗೂ ಪ್ರವಾಸಿಗಳು ಬಂದು ಸ್ನಾನಘಟ್ಟದಲ್ಲಿ ಸ್ನಾನ ಮಾಡುವ ಉದ್ದೇಶಕ್ಕೆ ಇಳಿಯುತ್ತಿದ್ದು ಮುಂದೆ ಸಂಭವಿಸಬಹುದಾದಂತಹ ಅನಾಹುತಗಳನ್ನು ತಪ್ಪಿಸುವ ಹಿತದೃಷ್ಟಿಯಿಂದ ಸ್ನಾನಘಟ್ಟದ ಬಳಿ ತೆರಳದಂತೆ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ಈ ಮೂಲಕ ಆದೇಶಿಸಲಾಗಿದೆ ಎಂದು ಕಡಬ ತಹಶೀಲ್ದಾರ್ ರಮೇಶ್ ಬಾಬು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.