ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ (ಜುಲೈ 24) ರಂದು ಸಕಲೇಶಪುರ, ಬೇಲೂರು ಆಲೂರು ಹಾಗೂ ಅರಕಲಗೂಡು ತಾಲೂಕಿನ ಎಲ್ಲಾ ಅಂಗನವಾಡಿ,ಸರ್ಕಾರಿ, ಅನುದಾನಿತ ಹಾಗೂ ಖಾಸಗಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಸಕ ಸಿಮೆಂಟ್ ಮಂಜುನಾಥ್ ಸೂಚನೆ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಹಸೀಲ್ದಾರ್ ರವರ ವರದಿ ಅಧರಿಸಿ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.