ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ತಡವಾಗಿ ಆರಂಭಗೊಂಡ ಮುಂಗಾರು ಮಳೆ ರಾಜ್ಯದ ಮೂರನೇ ಒಂದು ಭಾಗದಲ್ಲಿ ಅಬ್ಬರಿಸುತ್ತಿದೆ. ಈ ಕಾರಣದಿಂದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣಾಘಾತವೇ ಉಂಟಾಗಿದೆ.
ಕಳೆದ ಒಂದೆರಡು ವಾರದಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ, ಭೀಮಾ ಸೇರಿದಂತೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅಲ್ಲದೇ ಈವರೆಗೆ ಮಹಾಮಳೆಗೆ ಮೂವರು ಬಲಿಯಾಗಿದ್ದಾರೆ.
ಭಾರೀ ಮಳೆಯಿಂದಾಗಿ ಕಲಬುರ್ಗಿ ಜಿಲ್ಲೆಯಲ್ಲಿ ಇಬ್ಬರು, ಹಾವೇರಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಕೊಡಗಿನ ಭಾಗಮಂಡಲ, ಕುಕ್ಕೆ ಸುಬ್ರಹ್ಮಣದ ಸ್ನಾನಘಟ್ಟ ಮುಳುಗಡೆಯನ್ನು ಮಳೆಯಿಂದಾಗಿ ಉಂಟಾಗಿದೆ. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಕೂಡ ಮುಳುಗಡೆಯಾಗುವ ಭೀತಿ ಎದುರಿಸುತ್ತಿದೆ.
ರಾಜ್ಯದಲ್ಲಿ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಇಂದು ಕೂಡ ರಾಜ್ಯದಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಬಗ್ಗೆ ಮುನ್ಸೂಚನೆ ನೀಡಿರುವಂತ ಹವಾಮಾನ ಇಲಾಖೆ, ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿಂದ ಎಂದಿದೆ.
ಕರಾವಳಿಯಾದ್ಯಂತ ವರುಣ ಆರ್ಭಟಿಸಲಿದ್ದಾನೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆಯನ್ನು ತಿಳಿಸಿದೆ. ಹೀಗಾಗಿಯೇ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.