ಘಟ್ಟ ಪ್ರದೇಶದಲ್ಲಿ ಭಾರೀ ಮಳೆ| ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿತ

ಸಮಗ್ರ ನ್ಯೂಸ್: ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆ ಸಂಪರ್ಕ‌ ಕಡಿತಗೊಳ್ಳುವ ಭೀತಿ‌ ಎದುರಾಗಿದೆ.

Ad Widget ... ..

ಮಳೆ ಅಬ್ಬರಕ್ಕೆ ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿತ ಆರಂಭಗೊಂಡಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಹಲವು ಗಂಟೆಗಳ ವಾಹನ ಸಂಚಾರ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

Ad Widget

ಘಾಟ್ ರಸ್ತೆಯ ಆಲೆಕಾನ್- ಬಿದ್ರುತಳ ಮಧ್ಯದಲ್ಲಿ ರಸ್ತೆಗೆ ಮಣ್ಣು ಕುಸಿದ ಪರಿಣಾಮ ಸಂಚಾರ ವ್ಯತ್ಯಯ ಉಂಟಾಗಿದೆ. ಆತಂಕದಲ್ಲೇ ವಾಹನ ಸವಾರರು ಚಾಲನೆ ಮಾಡುತ್ತಿದ್ದು, ಸ್ಥಳದಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.

Leave a Comment

Your email address will not be published. Required fields are marked *