ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಂದ ಗ್ರಾಮದ ಬಸವೇಶ್ವರ ಕಾಲೋನಿಗೆ ಸಂಪರ್ಕ ಕಲ್ಪಿಸುವ ಕಾಲು ಸೇತುವೆಯು ಮಳೆಯ ಅಬ್ಬರಕ್ಕೆ ಮುಳುಗಡೆಯಾಗಿದೆ.
ಗೋಣಿಕೊಪ್ಪಲು ಪೊಲೀಸ್ ಠಾಣಾಧಿಕಾರಿ ದೀಕ್ಷಿತ್ ಮತ್ತು ಸಿಬ್ಬಂದಿಗಳು, ಸ್ಥಳಕ್ಕೆ ಭೇಟಿ ನೀಡಿ ಎರಡು ಕಡೆ ಬ್ಯಾರಿಕೇಡ್ ಅಳವಡಿಸಿ, ನದಿಯ ಮತ್ತೊಂದು ಬದಿಯಲ್ಲಿರುವ ಕಾಲೋನಿಯ ನಿವಾಸಿಗಳಿಗೆ ಧೈರ್ಯ ತುಂಬಿ ಅವರಿಗೆ ಬೇಕಾದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಭರವಸೆ ನೀಡಿ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊನ್ನಂಪೇಟೆ ತಾಲೂಕು ತಹಸಿಲ್ದಾರ್ ಎನ್.ಎಸ್.ಪ್ರಶಾಂತ್ ಹಾಗೂ ಕಂದಾಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಬೇಕಾದ ಸವಲತ್ತುಗಳನ್ನು ಒದಗಿಸುವ ಭರವಸೆಯನ್ನು ನೀಡಿದ್ದಾರೆ.