ಭಾರೀ ಮಳೆ ಹಿನ್ನೆಲೆ| ನಾಳೆ (ಜು.26) ಎಲ್ಲಾ ಶಾಲೆ, ಪ.ಪೂ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪ.ಪೂ ಕಾಲೇಜುಗಳಿಗೆ ಜು.26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Ad Widget ... ..

ಈಗಾಗಲೇ ಧಾರಾಕಾರ ಮಳೆಯಿಂದ ಸೋಮವಾರ ಮತ್ತು ಮಂಗಳವಾರ (ಜು. 24 ಮತ್ತು 25ರಂದು) ರಜೆ ಘೋಷಿಸಲಾಗಿತ್ತು. ಇದೀಗ ಕರಾವಳಿಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರ ಮೂರನೇ ದಿನವೂ ರಜೆ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *