ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಕೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 27 ರಂದು ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿನ ಪದವಿಪೂರ್ವ, ಪದವಿ , ಸ್ನಾತಕೋತ್ತರ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಕರಾವಳಿ ಭಾಗದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯಕ್ರಮಗಳನ್ನು ಕೈಗೊಂಡಿದೆ. ಅದ್ರಲ್ಲೂ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ ಭಾಗಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ.
ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹಲವು ಕಡೆಗಳಲ್ಲಿ ಮನೆಗಳು ಕುಸಿತವಾಗಿದ್ದು, ಮರಗಳು ಉರುಳಿ ಬಿದ್ದು ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ. ಸುಬ್ರಹ್ಮಣ್ಯದಲ್ಲಿ ಕುಮಾರಾಧಾರ ನದಿ ತುಂಬಿ ಹರಿಯುತ್ತಿರುವುದರಿಂದಾಗಿ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಮಂಗಳೂರು, ಮೂಡಬಿದಿರೆ ತಾಲೂಕುಗಳಲ್ಲಿಯೂ ಮಳೆಯಾಗುತ್ತಿದೆ.