ಖಾಸಗಿ ಕ್ಷಣಗಳ ವಿಡಿಯೋ ವೈರಲ್ ಬೆನ್ನಲ್ಲೇ ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ!!

ಸಮಗ್ರ ನ್ಯೂಸ್: ಖಾಸಗಿ ಕ್ಷಣಗಳ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದರಿಂದ ಮನನೊಂದ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.

Ad Widget ... ..

ನಗರದ ಖಾಸಗಿ ಕಾಲೇಜೊಂದರ ಟೆರೆಸ್ ಮೇಲೆ ಪರಸ್ಪರ ಪ್ರೀತಿಸುತ್ತಿದ್ದ ವಿದ್ಯಾರ್ಥಿಗಳಿಬ್ಬರು ಕುಳಿತಿದ್ದ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಶುಕ್ರವಾರ ವೈರಲ್‌ ಆಗಿತ್ತು. ಅವರಿಬ್ಬರು ಎರಡು ತಿಂಗಳ ಹಿಂದೆ ಆ ರೀತಿ ಕುಳಿತಿದ್ದ ಸಂದರ್ಭದಲ್ಲಿ ಅವರ ಅರಿವಿಗೆ ಬಾರದಂತೆ ಪಕ್ಕದ ಕಟ್ಟಡದಲ್ಲಿ ಕುಳಿತಿದ್ದ ಯುವಕರು ತಮ್ಮ ಮೊಬೈಲ್‌ ನಲ್ಲಿ ಸೆರೆಹಿಡಿದಿದ್ದರು.

Ad Widget

ಈ ಕೃತ್ಯದಿಂದ ಮನನೊಂದ ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಗಳಿಬ್ಬರ ಪೋಷಕರು ಪ್ರತ್ಯೇಕವಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *