ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮುಂದಿಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಅವಹೇಳನ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರದ ಭಕ್ತರು ಮತ್ತು ಸ್ಥಳೀಯರು ದೇವರ ಎದುರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಮತ್ತು ಅಣ್ಣಪ್ಪ ಬೆಟ್ಟದ ಮುಂಭಾಗದಲ್ಲಿ ಭಕ್ತರು ಅವಹೇಳನ ನಡೆಸುವವರಿಗೆ ಶಿಕ್ಷೆ ನೀಡುವಂತೆ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.
ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಪ್ರಾರ್ಥನೆ ಸಲ್ಲಿಸಿದ ಭಕ್ತರು, ಕೋರ್ಟ್‌ನಲ್ಲೂ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ನ್ಯಾಯ ಸಿಕ್ಕಿಲ್ಲ. ಕೊಲೆ ವಿಚಾರವಾಗಿ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಹೀನವಾಗಿ ಮಾತನಾಡುತ್ತಿದ್ದಾರೆ. ಸೌಜನ್ಯನ ಅತ್ಯಾಚಾರ ಮತ್ತು ಕೊಲೆ ಮಾಡಿದ ನೈಜ ಆರೋಪಿಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಮಾತನಾಡುವವರಿಗೆ ಶಿಕ್ಷೆ ನೀಡಬೇಕು.
ಮೊದಲು ಸದ್ಭುದ್ಧಿ ನೀಡು, ಬಳಿಕ ಶಿಕ್ಷೆ ನೀಡು ಎಂದು ನೂರಾರು ಮಂದಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಅಣ್ಣಪ್ಪ ಸ್ವಾಮಿ ಬೆಟ್ಟ ಬಳಿಯು ಪ್ರಾರ್ಥನೆ ಸಲ್ಲಿಸಿ ತೆಂಗಿನ ಕಾಯಿ ಹೊಡೆದರು. ಸಂತೋಷ್ ರಾವ್ ಬಿಡುಗಡೆ ಬಳಿಕ ಪ್ರಕರಣ ಮತ್ತೆ ಪ್ರಕರಣ ಬೆಳಕಿಗೆ ಬಂದಿದ್ದು, ಮತ್ತೆ ಜಸ್ಟೀಸ್ ಫಾರ್ ಸೌಜನ್ಯ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಆಗಿದೆ. ಈ ಪ್ರಕರಣದ ಮರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ಕೊಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.