ಸಮಗ್ರ ನ್ಯೂಸ್: ಆಗಸ್ಟ್ 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 9.55ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ನಿರ್ಗಮಿಸಿ ಸಂಜೆ 4.15ಕ್ಕೆ ಮಂಗಳೂರು ನಗರದ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಬಳಿಕ ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 10.45ಕ್ಕೆ ಬೆಂಗಳೂರಿಗೆ ವಾಪಾಸ್ ತೆರಳಲಿದ್ದಾರೆ.