ಸಮಗ್ರ ನ್ಯೂಸ್: ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ನಿವಾಸಿ ಗಿರೀಶ್ (25) ಎಂದು ಗುರುತಿಸಲಾಗಿದೆ.
ಈತ ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಮೃತದೇಹವನ್ನು ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಕಳೆದ ವಾರವಷ್ಟೇ ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ಗಿರೀಶ್ ತೆರಳಿದ್ದಾಗಿ ತಿಳಿದುಬಂದಿದೆ. ಕೇದಾರನಾಥ ಪೊಲೀಸರಿಂದ ಗಿರೀಶ್ ಸಾವನ್ನಪ್ಪಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.