ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ :ಡಾ.ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರ ಹಾಗು ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಲು ಒತ್ತಾಯಿಸುತ್ತೇನೆ ಎಂದು ಡಾ. ವೀರೇಂದ್ರ ಹೆಗ್ಗಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Ad Widget ... ..

ಸೌಜನ್ಯ ಸಾವು ಪ್ರಕರಣ ಪ್ರಸ್ತುತ ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗು ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ ಹಾಗು ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗು ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *