Ad Widget .

ಚುನಾವಣೆ ಗೆಲ್ಲಲು ಮೋದಿ ಹೀಗೂ ಮಾಡಿಸಬಹುದೇ? ಕಾಶ್ಮೀರದ ಮಾಜಿ ರಾಜ್ಯಪಾಲರಿಂದ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಅಪಾಯಕಾರಿ ವ್ಯಕ್ತಿ. ಮುಂದಿನ ಲೋಕಸಭೆ ಚುನಾವಣೆ ಗೆಲುವಿಗೆ ರಾಮ ಮಂದಿರದ ಮೇಲೆ ದಾಳಿ ನಡೆಸಬಹುದು ಅಥವಾ ಯಾವುದೇ ಬಿಜೆಪಿ ನಾಯಕನ ಹತ್ಯೆ ಮಾಡಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Ad Widget . Ad Widget .

ಸಂದರ್ಶನವೊಂದರಲ್ಲಿ ಪುಲ್ವಾಮಾ ದಾಳಿಯನ್ನು ಉಲ್ಲೇಖಿಸಿ ಮಾತನಾಡುತ್ತಿದ್ದ ಸತ್ಯಪಾಲ್ ಮಲಿಕ್ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Ad Widget . Ad Widget .

2024ರ ಚುನಾವಣೆಯಲ್ಲಿ ಗೆಲ್ಲಲು ಜನರು ರಾಮಮಂದಿರದ ಮೇಲೆ ದಾಳಿ ನಡೆಸಬಹುದು ಅಥವಾ ಬಿಜೆಪಿಯ ದೊಡ್ಡ ನಾಯಕನ ಹತ್ಯೆಯನ್ನು ಸಂಘಟಿಸಬಹುದು. ಪುಲ್ವಾಮಾ ದಾಳಿಯನ್ನು ಸೃಷ್ಟಿಸಬಲ್ಲವರು ಏನು ಬೇಕಾದರೂ ಮಾಡಬಹುದು ಎಂದು ಸತ್ಯಪಾಲ್ ಮಲಿಕ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಕಾಶ್ಮೀರ ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳನ್ನು ನಿರ್ಲಕ್ಷಿಸಿದ್ದರಿಂದ ಪುಲ್ವಾಮಾ ದಾಳಿ ಸಂಭವಿಸಿದೆ. ಭ್ರಷ್ಟಾಚಾರದ ಬಗ್ಗೆ ಮೋದಿ ತಲೆ ಕೆಡಿಸಿಕೊಂಡಿಲ್ಲ. ಸೈನಿಕರನ್ನು ವಿಮಾನದಲ್ಲಿ ಕರೆದೊಯ್ಯುವ ಸಿಆರ್‌ಪಿಎಫ್‌ನ ಬೇಡಿಕೆಯನ್ನು ಕೇಂದ್ರ ಗೃಹ ಸಚಿವಾಲಯ ತಿರಸ್ಕರಿಸಿದೆ, ಸೈನಿಕರನ್ನು ಕರೆದೊಯ್ಯುವ ಮಾರ್ಗದಲ್ಲಿ ಸೂಕ್ತ ಭದ್ರತಾ ತಪಾಸಣೆ ಇಲ್ಲ ಎಂದು ಮಲಿಕ್ ಹಿಂದೆ ಹೇಳಿದ್ದರು

Leave a Comment

Your email address will not be published. Required fields are marked *