ಸಮಗ್ರ ನ್ಯೂಸ್: ಕಾರ್ಕಳದಲ್ಲಿ ಮಂಗಳೂರಿನ ವೈದ್ಯರ ತಂಡದ ಕಾರು ತಡೆದು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂಟಲ್ಪಾಡಿ ಗ್ರಾಮದ ಬಳಿ ಮಂಗಳೂರಿನ ಕಾಲೇಜಿನ ವೈದ್ಯರ ತಂಡ ತೆರಳುತ್ತಿದ್ದ ಕಾರು ತಡೆದು ಅವಾಜ್ ಹಾಕಿ ನೈತಿಕ ಪೊಲೀಸ್ಗಿರಿ ನಡೆಸಿದ್ದಾರೆ. ಈ ಸಂಬಂಧ ಕಾರ್ಕಳ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ, ಸಂದೀಪ್ ಪೂಜಾರಿ, ಸುಜಿತ್ ಸಫಲಿಗ ಬಂಧಿತ ಆರೋಪಿಗಳು.
ಮಾಳ ಎಸ್.ಕೆ. ಗಡಿ ಬಳಿಯಿಂದ ಕಾರು ಹಿಂಬಾಲಿಸಿದ್ದ ಗುಂಪು, ಕುಂಟಲ್ಪಾಡಿ ಬಳಿ ಕಾರು ಅಡ್ಡಗಟ್ಟಿ ಭಿನ್ನ ಕೋಮಿಗೆ ಸೇರಿದವರು ನೀವು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಜ್ ಹಾಕುವುದರ ಜೊತೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಆ ವೇಳೆ ಕಾರಿನಲ್ಲಿದ್ದ ಮಹಿಳೆ 112ಗೆ ಕರೆಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಪೊಲೀಸರು, ಐವರನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.