ಮಂಗಳೂರು: 7ಲಕ್ಷ ರೂ. ಮೌಲ್ಯದ ಮಾದಕ ವಸ್ತು, ಕಾರು ಸಹಿತ ಓರ್ವ ವಶಕ್ಕೆ

ಸಮಗ್ರ ನ್ಯೂಸ್: ಏಳು ಲಕ್ಷ ರೂ. ಮೌಲ್ಯದ 250 ಗ್ರಾಂ ಚರಸ್ ಹಾಗೂ ಕಾರನ್ನು ಜಪ್ತಿ ಮಾಡಿ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

. Ad Widget . Ad Widget

ಅಬ್ದುಲ್‌ ಅಝೀಜ್‌ (34) ಬಂಧಿತ ಆರೋಪಿಯಾಗಿದ್ದು, ಅತನಿಂದ ಸುಮಾರು 7 ಲಕ್ಷ ರೂ. ಮೌಲ್ಯದ ಚರಸ್‌ ಮತ್ತು ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

. Ad Widget . . Ad Widget . Ad Widget

ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿ ಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್‌ ಫ್ಲೆಟ್‌ ಇಲ್ಲದ ಸ್ವಿಫ್ಟ್‌ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ತಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಸೂರಿಂಜೆ ಕಿನ್ನಿಗುಡ್ಡೆ ಹೌಸ್‌ ನಿವಾಸಿ ಅಬ್ದುಲ್‌ ಅಝೀಜ್‌ನನ್ನು ವಶಕ್ಕೆ ಪಡೆದು ಕಾರು ಪರಿಶೀಲನೆ ಮಾಡಿದಾಗ 250 ಗ್ರಾಂ ತೂಕದ ಮಾದಕ ವಸ್ತು ಚರಸ್‌ ಪತ್ತೆಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.

ಇನ್ನು ಪರಾರಿಯಾದ ಆರೊಪಿಯ ಪತ್ತೆಗಾಗಿ ಪೊಲೀಸರು ವ್ಯಾಪಕ ಕಾರ್ಯಚರಣೆ ನಡೆಸುತ್ತಿದ್ದಾರೆ.

ಬಜಪೆ ಠಾಣಾ ಪಿ.ಐ. ಪ್ರಕಾಶ್‌ ನೇತೃತ್ವದ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿತ್ತು.

Leave a Comment

Your email address will not be published. Required fields are marked *