ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕ ರೀತಿಯ ಸುಳ್ಳು ಆರೋಪಗಳನ್ನು ಮಾಡಿ, ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ‘ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ’ ಸಂಘಟನೆಯ ಮೂಲಕ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಉಜಿರೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ಸಭೆ ನಡೆಯಿತು.
ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಪೇಟೆ ಮೂಲಕ ಸಾಗಿಬಂದ ಬೃಹತ್ ಮೆರವಣಿಗೆ ಎಸ್.ಡಿ.ಎಂ ಕಾಲೇಜು ಎದುರಿಗೆ ಸಾಗಿ ಬಂತು. ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಜನರು ಶಿಸ್ತುಬದ್ಧವಾಗಿ ಮೆರವಣಿಗೆ ಮೂಲಕ ಸಾಗಿಬಂದರು. ಎಲ್ಲರ ಕೈಯಲ್ಲೂ ಕ್ಷೇತ್ರದ ಪರವಾಗಿ ಮತ್ತು ಡಾ. ಹೆಗ್ಗಡೆ ಪರವಾದ ಬರಹಗಳಿದ್ದ ಫಲಕಗಳಿದ್ದವು.
ಸುಮಾರು ಒಂದು ಕಿಲೋಮೀಟರ್ ದೂರ ಸಾಗಲಿರುವ ಈ ಜಾಥಾ ಉಜಿರೆ ಎಸ್.ಡಿ.ಎಂ ಕಾಲೇಜು ಎದುರು ಬಂದು ಸೇರಲಿದ್ದು, ಬಳಿಕ ಇಲ್ಲಿ ಬೃಹತ್ ಸಮಾವೇಶ ನಡೆಯಿತು.
ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ ಯತ್ನ: ಸಭೆ ಬಳಿಕ ನಡೆದ ಪಾದಯಾತ್ರೆ ವೇಳೆ ಸ್ಥಳಕ್ಕೆ ಆಗಮಿಸಿದ ಸೌಜನ್ಯ ಕುಟುಂಬಸ್ಥರ ಮೇಲೆ ಭಕ್ತವೃಂದದ ಕೆಲವರು ಆಕ್ರೋಶಿತರಾಗಿ ಹಲ್ಲೆಗೆ ಯತ್ನಿಸಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ ಮಗಳಿಗೆ ನ್ಯಾಯ ಕೊಡಿ ಎಂದು ಸ್ಥಳಕ್ಕೆ ತೆರಳಿದ್ದು ಈ ವೇಳೆ ಅವರ ಮೇಲೆ ಪ್ರತಿಭಟನಾಕಾರರು ಆಕ್ರೋಶಿತರಾದರು. ಸೌಜನ್ಯ ಸಹೋದರ ಜಯರಾಮ ಗೌಡರನ್ನೂ ಎಳೆದಾಡಿದ್ದು, ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.