Ad Widget .

ಸೌಜನ್ಯ ಅತ್ಯಾಚಾರ; ಕೊಲೆ ಪ್ರಕರಣ| ಸೌಜನ್ಯ ಪರ ಬ್ಯಾನರ್ ತೆರವಿಗೆ ಬೆಳ್ತಂಗಡಿ ತಾ.ಪಂ ಇಒ ಆದೇಶ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ ಕಳೆದ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಈಗಲೂ ಬಿಸಿಬಿಸಿ ಚರ್ಚೆಯಲ್ಲಿದೆ. ಈ ಪ್ರಕರಣದ ಆರೋಪಿಗಳು ಯಾರು ಅನ್ನೋದನ್ನು ತನಿಖಾಧಿಕಾರಿಗಳಿಗೆ ಇಲ್ಲಿಯ ತನಕ ಪತ್ತೆ ಹಚ್ಚಲಾಗದಿದ್ದರೂ ಕೂಡ ಜನರ ಬಾಯಲ್ಲಿ ಅವರಿವರ ಹೆಸರು ಕಳೆದ 11 ವರ್ಷಗಳಿಂದಲೂ ಹರಿದಾಡುತ್ತಲೇ ಇದೆ. ಈ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ರಕ್ಷಣೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿರುವ ಮಧ್ಯೆಯೇ ಇತ್ತೀಚೆಗೆ ಬಂಧಿತನಾಗಿದ್ದ ಸಂತೋಷ್ ರಾವ್ ಅವರನ್ನು ನ್ಯಾಯಾಲಯ ನಿರ್ದೋಷಿ ಎಂದು ಬಿಡುಗಡೆ ಮಾಡಿತ್ತು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಮಧ್ಯೆ ಸದ್ಯ ಆಗಿರುವ ಅಚ್ಚರಿಯ ಬೆಳವಣಿಗೆ ಅಂದರೆ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ಗಳ ತೆರವಿಗೆ ಆದೇಶ ಹೊರಡಿಸಿರೋದು. ಹೌದು. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವಿಗೆ ಸೂಚನೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget . Ad Widget .

ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರ ಮನವಿ ಹಿನ್ನೆಲೆ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ನ ಪಿಡಿಓಗಳಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವಿಗೆ ಆದೇಶ ಹೊರಡಿಸಿದ್ದು, ಈ ನಿರ್ಧಾರ ಸಾರ್ವಜನಿಕರಲ್ಲಿ ಸಾಕಷ್ಟು ಅನುಮಾನ ಮತ್ತು ಅಸಮಾಧಾನವನ್ನು ಉಂಟು ಮಾಡಿದೆ.

ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು‌ ನೀಡಲಾಗಿತ್ತು. ಈ ದೂರಿನಲ್ಲಿ ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ‘ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡುವ ನಿಟ್ಟಿನಲ್ಲಿ’, ‘ಯಾರು ಯಾರನ್ನೋ ಆರೋಪಿತರನ್ನಾಗಿ ಬಿಂಬಿಸಿಕೊಂಡು’ ‘ಧರ್ಮ ಧರ್ಮಗಳ ನಡುವೆ ಒಡಕು ಉಂಟು ಮಾಡಲಾಗುತ್ತಿದೆ’ ‘ಇದರಿಂದಾಗಿ ಸಮಾಜದಲ್ಲ, ಅಶಾಂತಿ ಉಂಟಾಗಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ’ ‘ಆದುದರಿಂದ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ’ ‘ಕಾನೂನು ಬಾಹಿರವಾಗಿ ಅಳವಡಿಸಿರುವ ಸೌಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ಪ್ಲೆಕ್ಸ್ ಗಳನ್ನು ಕೂಡಲೇ ತೆರವುಗೊಳಿಸಬೇಕು’ ಎಂದು ದ‌.ಕ ಜಿಲ್ಲಾ ಎಸ್ಪಿಗೆ ದೂರು ಸಲ್ಲಿಸಲಾಗಿತ್ತು.

Leave a Comment

Your email address will not be published. Required fields are marked *