Ad Widget .

ಮಂಗಳೂರು: ಮರ್ಯಾದೆ ನೀಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿದ ಶಾಸಕರು

ಸಮಗ್ರ ನ್ಯೂಸ್:‌ ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕೆಲ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದಿಲ್ಲ, ಅದೂ ಅಲ್ಲದೆ ಶಾಸಕರಿಗೆ ಅಧಿಕಾರಿಗಳು ಮರ್ಯಾದಿಯೇ ನೀಡುತ್ತಿಲ್ಲ ಈ ಕಾರಣ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನು ಶಾಸಕರು ನೀಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಸಕರ ಹಕ್ಕುಗಳಿಗೆ‌ ಚ್ಯುತಿ ತರುವ ಘಟನೆಗಳು ನಡೆಯುತ್ತಿವೆ. ವಿರೋಧ ಪಕ್ಷದ ಶಾಸಕರನ್ನು ಅಧಿಕಾರಿಗಳ ಮೂಲಕ ದಮನಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಮುಂದಿನ ಮೂರು ದಿನಗಳ ಒಳಗಾಗಿ ಕ್ರಮ‌ಕೈಗೊಳ್ಳದಿದ್ದರೆ ಆಗಸ್ಟ್ 14ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ‌ ಎದುರು ಧರಣಿ ನಡೆಸುತ್ತೇವೆ’ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Ad Widget . Ad Widget . Ad Widget .

ರಾಜ್ಯದಲ್ಲಿ ನೂತನ‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಮ‌ ಪಂಚಾಯತ್‌ ಕಚೇರಿ ಉದ್ಘಾಟನೆ ಕಾರ್ಯಕ್ರಮವನ್ನು ಜುಲೈ 31ರಂದು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಿಗದಿಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಂಬಂಧಿಸಿ ಶಿಷ್ಟಾಚಾರ ಉಲ್ಲಂಘನೆ ಆರೋಪದ ಮೇಲೆ ಗ್ರಾಮ ಪಂಚಾಯತ್ ಗ್ರೇಡ್ -2 ಕಾರ್ಯದರ್ಶಿ, ಪಂಚಾಯತ್ ಪ್ರಭಾರಿ ಅಭಿವೃದ್ಧಿ ಅಧಿಕಾರಿ ಅವರನ್ನು ಅಮಾನತುಗೊಳಿಸಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಜಿಲ್ಲೆಗೆ ಭೇಟಿ ನೀಡಿದಾಗಲೂ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿ ಇದನ್ನು ಹಿಂಪಡೆಯಲು ಸೂಚಿಸಿದರೂ ಈ ಆದೇಶಕ್ಕೆ ಬೆಲೆ ನೀಡಿಲ್ಲ’ ಎಂದು ಆರೋಪಿಸಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲೂ ಇಂತಹುದೇ ಘಟನೆ ನಡೆದಿದೆ. ಈ ಬಗ್ಗೆ ವಿವರ ಕೇಳಿದರೆ ಮೇಲಧಿಕಾರಿಗಳ ಸೂಚನೆ ಎಂಬ ಉತ್ತರ ಬರುತ್ತದೆ. ಕ್ಷೇತ್ರದಲ್ಲಿ ಶಾಸಕರಿಗೆ ಕೆಲಸ ಮಾಡಲು ಆಗದ ಪರಿಸ್ಥಿತಿ ಇದೆ. ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರು ಈ‌ ಬಗ್ಗೆ ಗಮನ ಹರಿಸಿ, ತಪ್ಪನ್ನು ಸರಿಪಡಿಸದಿದ್ದಲ್ಲಿ ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಧರಣಿ ನಡೆಸುತ್ತೇವೆ ಎಂದರು.

Leave a Comment

Your email address will not be published. Required fields are marked *