ಸಮಗ್ರ ನ್ಯೂಸ್: ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಅವರ ಹೊಟ್ಟೆಯಿಂದ 15ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆಯುವಲ್ಲಿ ಮಧ್ಯಪ್ರದೇಶದ ಇಂದೋರ್‌ನ ವೈದ್ಯರು ಯಶಸ್ವಿಯಾಗಿದ್ದಾರೆ.
ಇಂದೋರ್ ಇಂಡೆಕ್ಸ್ ಆಸ್ಪತ್ರೆಗೆ ದಾಖಲಾಗಿದ್ದ 41 ವರ್ಷದ ಮಹಿಳೆಗೆ 12 ವೈದ್ಯರು ಹಾಗೂ ಸಹಾಯಕ ಸಿಬ್ಬಂದಿಯನ್ನೊಳಗೊಂಡ ತಂಡ ಸತತ 2 ಗಂಟೆಗಳ ಅವಧಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿದೆ.
ಮಹಿಳೆಯ ತೂಕ 49 ಕೆಜಿ ಇದ್ದು, ಅದರಲ್ಲಿ ಗೆಡ್ಡೆಯ ತೂಕವೇ 15 ಕೆಜಿ ಇತ್ತು. ಗೆಡ್ಡೆ ಮಾರಣಾಂತಿಕವಾಗಿ ಪರಿಣಮಿಸಿದ್ದ ಕಾರಣ ಶಸ್ತ್ರಚಿಕಿತ್ಸೆ ನಡೆಸಿ, ಯಶಸ್ವಿಯಾಗಿ ಗೆಡ್ಡೆಯನ್ನು ಹೊರತೆಗೆದಿದ್ದಾರೆ.
ಈ ಬಗ್ಗೆ ಮಾತನಾಡಿದ ಡಾ.ಅತುಲ್ ವ್ಯಾಸ್, ಗಡ್ಡೆಯು ದೊಡ್ಡದಾಗಿರುವುದರಿಂದ, ಆಹಾರ ಸೇವಿಸುವುದಕ್ಕೆ ಹಾಗೂ ನಡೆದಾಡುವುದಕ್ಕೆ ಅಡ್ಡಿಯಾಗುತ್ತಿತ್ತು. ಇದರಿಂದ ಮಹಿಳೆಯ ಆರೋಗ್ಯದ ಮೇಲೆ ಪರಿಣಾಮ ಬೀರಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆ ಮೂಲಕ ಗೆಡ್ಡೆಯನ್ನು ಹೊರತೆಗೆಯನು ನಿರ್ಧರಿಸಲಾಯಿತು. ಆದರೆ ರೋಗಿಯ ಜೀವಹಾನಿಗುವ ಅಪಾಯವೂ ಇತ್ತು.
ಹೀಗಾಗಿ ಬಹಳ ಎಚ್ಚರಿಕೆಯಿಂದ ಶಸ್ತ್ರ ಚಿಕಿತ್ಸೆ ಮಾಡಿ ಗೆಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆಯಲಾಗಿದೆ. ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.