ಕಲ್ಲುಗುಂಡಿ: ಹಿಟ್ ಆ್ಯಂಡ್ ರನ್; ಪಾದಚಾರಿ ಗಂಭೀರ

ಸಮಗ್ರ ನ್ಯೂಸ್:ಪಾದಚಾರಿಗೆ ಸ್ಕೂಟಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಆ. 10ರಂದು ನಡೆದಿದ್ದು, ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾಗಿ ತಿಳಿದುಬಂದಿದೆ.

Ad Widget ... ..

ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಕೆಲಸ ಮಾಡುವ ವಿಶ್ವನಾಥ್ ಎಂಬವರು ನಡೆದುಕೊಂಡು ಹೋಗುತ್ತಿರುವಾಗ ಹಿಂಬದಿಯಿಂದ ಬಂದ ಸ್ಕೂಟಿ ಗುದ್ದಿದ್ದು, ಅಪಘಾತದಿಂದ ವಿಶ್ವನಾಥ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

ಗಾಯಾಳುವನ್ನು ಸಂಪಾಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ಸುಳ್ಯಕ್ಕೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾದ ಸ್ಕೂಟಿ ಸವಾರನಿಗೆ ಹುಡುಕಾಟ ನಡೆಸಲಾಗುತ್ತಿದೆ.

Leave a Comment

Your email address will not be published. Required fields are marked *