ಚಿಕ್ಕಮಗಳೂರು :ಮತ್ತೆ ಮುನ್ನಲೆಗೆ ಬಂದ ಹಿಜಾಬ್

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ಮುನ್ನಲೆಗೆ ಬಂದಿದೆ. ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಹಿಜಾಬ್ ಧರಿಸಿ ಕುಳಿತಿರುವ ವಿಡಿಯೋ ವೈರಲ್ ಆಗಿದೆ.

Ad Widget ... ..

ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಎಂದು ಆದೇಶ ಮಾಡಿದ್ದು, ವಾರದ 6 ದಿನವೂ ಸಮವಸ್ತ್ರ ಧರಿಸಬೇಕೆಂದು ಆದೇಶ ಹೊರಡಿಸಿದೆ.

Ad Widget

ಸಮವಸ್ತ್ರ ಧರಿಸದ ವಿದ್ಯಾರ್ಥಿಗಳಿಗೆ ಕಾಲೇಜು ಆವರಣ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, ಸಮವಸ್ತ್ರ ಧರಿಸಿ ಐಡಿ ಕಾರ್ಡ್ ತೋರಿಸಿಯೇ ತರಗತಿಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ.

ನಿನ್ನೆ(ಆ. ೧೦) ಮೊದಲ ವರ್ಷದ ಪದವಿ ವಿದ್ಯಾರ್ಥಿನಿ ಹಿಜಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಬಳಿಕ ಶಿಕ್ಷಕರ ಸೂಚನೆ ಮೇರೆಗೆ ಹಿಜಬ್ ತೆಗೆದಿದ್ದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *