ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ| ನೌಕರರಿಗೆ ತೀವ್ರ ಗಾಯ

ಸಮಗ್ರ ನ್ಯೂಸ್: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದ್ದು, 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿರುವುದು ವರದಿಯಾಗಿದೆ.

Ad Widget ... ..

ಇಂದು (ಆ.11) ಗುಣ ನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಬಹುತೇಕ ಎಲ್ಲ ನೌಕರರಿಗೂ ಸುಟ್ಟ ಗಾಯಗಳಾಗಿದೆ.

Ad Widget

ಬೆಂಕಿ ಅವಘಡ ಸಂಭವಿಸಿದ ಬೆನ್ನಲ್ಲಿಯೇ ಬಿಬಿಎಂಪಿ ಆಯುಕ್ತರು ಹಾಗೂ ಡಿಸಿಪಿ ಶ್ರೀನಿವಾಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಗೊಂಡ ಸಿಬ್ಬಂದಿಗಳನ್ನು ಅಧಿಕಾರಿಗಳು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Leave a Comment

Your email address will not be published. Required fields are marked *