‘ಅನ್ನಭಾಗ್ಯ’ದಲ್ಲಿ ಇನ್ಮುಂದೆ ಹಣದ ಬದಲು‌ 10 ಕೆ.ಜಿ ಅಕ್ಕಿ| ಆಂಧ್ರದಿಂದ ಅಕ್ಕಿ ಕೊಳ್ಳಲು ನಿರ್ಧಾರ

ಸಮಗ್ರ ನ್ಯೂಸ್: ಅನ್ನಭಾಗ್ಯ ಯೋಜನೆಗೆ ಆಂಧ್ರಪ್ರದೇಶದ ಅಕ್ಕಿ ಬರಲಿದೆ. ಎಫ್.ಸಿ.ಐ. ನಿಗದಿಪಡಿಸಿದ ದರಕ್ಕೆ ಅಕ್ಕಿ ಪೂರೈಕೆ ಮಾಡಲು ಆಂಧ್ರಪ್ರದೇಶ ಸರ್ಕಾರ ಮುಂದೆ ಬಂದಿದೆ. ಈ ಕುರಿತಾಗಿ ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರೊಂದಿಗೆ ಆಂಧ್ರಪ್ರದೇಶದ ಆಹಾರ ಇಲಾಖೆ ಸಚಿವ ಕಾರುಮುರಿ ವೆಂಕಟನಾಗೇಶ್ವರರಾವ್ ನೇತೃತ್ವದ ನಿಯೋಗ ಚರ್ಚೆ ನಡೆಸಿದೆ.

Ad Widget ... ..

ಬೆಂಗಳೂರಿನಲ್ಲಿ ಉಭಯ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದ್ದು, ಎಫ್‌ಸಿಐ ನಿಗದಿಪಡಿಸಿದ ದರದಲ್ಲಿ ಅಕ್ಕಿ ಪೂರೈಕೆ ಮಾಡಲು ಅವಕಾಶ ನೀಡುವ ಜೊತೆಗೆ ನಿರ್ದಿಷ್ಟ ಪ್ರಮಾಣವನ್ನು ತಿಳಿಸಬೇಕು. ಆದಷ್ಟು ಬೇಗನೆ ಅನುಮತಿ ನೀಡಿದಲ್ಲಿ ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ನಿಯೋಗ ಹೇಳಿದೆ.

Ad Widget

ನಿಯೋಗದ ಜತೆ ವಿಸ್ತೃತ ಚರ್ಚೆ ನಡೆಸಿದ ಸಚಿವ ಮುನಿಯಪ್ಪ, ಮಾತುಕತೆಯ ವಿವರಗಳ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಒಪ್ಪಿಗೆ ಪಡೆದು ನಿಮಗೆ ಮಾಹಿತಿ ನೀಡುವುದಾಗಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

Leave a Comment

Your email address will not be published. Required fields are marked *