ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆ ಕೊಡಗಿನ ಮತ್ತಿಗೋಡು ಶಿಬಿರದಲ್ಲಿ ಮೃತ್ಯು

ಸಮಗ್ರ ನ್ಯೂಸ್: ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದ ಆನೆಯನ್ನು ಕಡಬ ತಾಲೂಕಿನ ಕೊಂಬಾರು ಸಮೀಪ ಸೆರೆ ಹಿಡಿದಿದ್ದ ಕಾಡಾನೆಯೊಂದು ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಮೃತಪಟ್ಟಿದೆ ಎಂದು ಆ. 11ರಂದು ವರದಿಯಾಗಿದೆ.

Ad Widget ... ..

ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆಯನ್ನು ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಸೇರಿಸಲಾಗಿತ್ತು. ಆದರೆ ಆ.11ರಂದು ಈ ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಅದರ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು.

Ad Widget

ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲದಲ್ಲಿ ಫೆಬ್ರವರಿ 20ರಂದು ಬೆಳ್ಳಂ ಬೆಳಗ್ಗೆ ಕಾಡಾನೆ ದಾಳಿಗೆ ರಂಜಿತಾ (24) ಹಾಗೂ ರಮೇಶ್ ರೈ (58) ಎಂಬವರು ಮೃತಪಟ್ಟಿದ್ದರು.

Leave a Comment

Your email address will not be published. Required fields are marked *