ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ(sullia) ತೊಡಿಕಾನದಲ್ಲಿ ಅನ್ಯಕೋಮಿನ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಸುಳ್ಯ ಪೊಲೀಸ್ ಠಾಣೆಗೆ ಅರುಣ್ ಕುಮಾರ್ ಪುತ್ತಿಲ (Arun kumar puttila) ಭೇಟಿ ನೀಡಿದ್ದಾರೆ.
ಘಟನೆಯ ವಿವರ: ಸುಳ್ಯ ತಾಲೂಕಿನ ಅರಂತೋಡು(Aranthodu) ಕಡೆ ಟ್ಯಾಪಿಂಗ್ ಕೆಲಸ ವಹಿಸಿಕೊಂಡು ಮಾಡುತ್ತಿದ್ದ ಅನ್ಯಕೋಮಿನ ವ್ಯಕ್ತಿ ಮಹಿಳೆಯೊಬ್ಬರನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆ ಎಂಬ ಅನುಮಾನದಿಂದ ಕೆಲ ಯುವಕರು ಕಾರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಆ.12ರ ಸಂಜೆ ಆತ ಮಹಿಳೆಯನ್ನು ಸುಳ್ಯಕ್ಕೆ ಬಿಟ್ಟು ತೊಡಿಕಾನ ಕಡೆಗೆ ಬರುತ್ತಿದ್ದಾನೆಂಬ ಮಾಹಿತಿ ದೊರೆತ ಸಂಘಟನೆಯ ಕೆಲವು ಯುವಕರು ಅಡ್ಯಡ್ಕ ಸಮೀಪ ಕಾರನ್ನು ಅಡ್ಡಗಟ್ಟಿ ತಡೆದು ನಿಲ್ಲಿಸಿದರೆಂದೂ, ಸುಳ್ಯದಿಂದ ಬಂದ ಸಂಘಟನೆಯ ಇಬ್ಬರು ಯುವಕರು ಆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದರೆಂದು ತಿಳಿದುಬಂದಿದೆ. ಹಲ್ಲೆ ಗೊಳಗಾದ ವ್ಯಕ್ತಿ ಸುಳ್ಯ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾನೆ ಈ ಸಂಬಂಧ ಪೋಲೀಸರು ಪ್ರಕರಣ ದಾಖಲಿಸಿ ಅರ್ಜುನ್(Arjun) ಎಂಬ ಯುವಕನನ್ನು ವಶಕ್ಕೆ ಪಡೆದಿದ್ದಾರೆ.
ಈ ಕಾರಣ ಆತನನ್ನ ಬಿಟ್ಟು ಕಳಿಸಬೇಕೆಂದು ಒತ್ತಾಯಿಸಿ ಸುಮಾರು 25 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಸುಳ್ಯ ಪೋಲೀಸ್ ಠಾಣೆಯೆದುರು ಜಮಾಯಿಸಿದಾಗ ಹಲ್ಲೆ ನಡೆಸಿದ ಆರೋಪಿಗಳನ್ನು ಹಾಜರುಪಡಿಸಿದರೆ ಈ ಯುವಕನನ್ನು ಬಿಡುವುದಾಗಿ ಪೋಲೀಸರು ಹೇಳಿದ್ದಾರೆನ್ನಲಾಗುತ್ತಿದೆ. ಇನ್ನೂ ಮುಖಂಡರುಗಳಾದ ಹರೀಶ್ ಕಂಜಿಪಿಲಿ,(Harish kanjipili) ಸಂತೋಷ್ ಕುತ್ತಮೊಟ್ಟೆ (Santhosh kuttamute)ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರು ಆಗಮಿಸಿದ್ದಾರೆ.