ಸಮಗ್ರ ನ್ಯೂಸ್: ಉಗ್ರ ಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆ ಭಾಗಿಯಾಗಿರುವುದನ್ನು ಶಂಕಿಸಿ 5 ರಾಜ್ಯಗಳ 14 ಕಡೆ ಏಕಕಾಲಕ್ಕೆ ಎನ್‌ಐಎ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಭಾರತದಲ್ಲಿ 2047ರೊಳಗೆ ಪಿಎಫ್ ಐ ಆರ್ಮಿ ಸ್ಥಾಪಿಸಲು ಮುಂದಾಗಿರುವ ಮಾಹಿತಿ ಸಿಕ್ಕಿರುವ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣ ಕನ್ನಡ , ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಹಾಗೂ ಇತರ ರಾಜ್ಯಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ಮಾಡಿದೆ.
ಕೆಲ ದಿನಗಳ ಹಿಂದೆ ಶಸ್ತ್ರಾಸ್ತ್ರ ತರಬೇತಿ, ಐರನ್ ರಾಡ್ಸ್, ಕತ್ತಿಗಳ ತರಬೇತಿ ನೀಡಿದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಕೆಲ ಪಿಎಫ್ ಐ ಏಜೆಂಟರನ್ನು ಎನ್‌ಐಎ ಬಂಧಿಸಿತ್ತು. ಈ ನಿಟ್ಟಿನಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.