ಹರ್ ಘರ್ ತಿರಂಗಾ| ಸೋಶಿಯಲ್ ಮೀಡಿಯಾ ಪ್ರೊಫೈಲ್ ಬದಲಿಸಲು ಪಿಎಂ ಮೋದಿ ಕರೆ

ಸಮಗ್ರ ನ್ಯೂಸ್: 76ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹಾಗೂ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ದೇಶದ ಜನರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳ ಡಿಪಿಯನ್ನು ರಾಷ್ಟ್ರ ಧ್ಜಜವನ್ನಾಗಿ ಬದಲಾಯಿಸಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Ad Widget ... .. Ad Widget .

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಹರ್ ಘರ್ ತಿರಂಗಾ ಅಭಿಯಾನದಲ್ಲಿ ಉತ್ಸಾಹದಿಂದ ಭಾಗವಹಿಸಿ, ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಯನ್ನು ರಾಷ್ಟ್ರ ಧ್ವಜವಾಗಿ ಬದಲಾಯಿಸೋಣ. ದೇಶದ ಪ್ರೀತಿ ಮತ್ತು ನಮ್ಮ ನಡುವಿನ ಬಾಂಧವ್ಯವನ್ನು ಗಾಢವಾಗಿಸುವ ಈ ಅನನ್ಯ ಪ್ರಯತ್ನವನ್ನು ಬೆಂಬಲಿಸೋಣ ಎಂದು ಕರೆ ನೀಡಿದ್ದಾರೆ.

Ad Widget

2022ರಲ್ಲಿ 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿ ಮನೆಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲು ಸಲುವಾಗಿ ಈ ಹರ್ ಘರ್ ತಿರಂಗಾ ಅಭಿಯಾವನ್ನು ಕೈಗೊಳ್ಳಲಾಗಿತ್ತು. ಪ್ರತಿ ಮನೆಯ ಮೇಲೆ ತಿರಂಗಾ ಹಾರಿಸುವಂತೆ ನಮೋ ಕರೆ ನೀಡಿದ್ದರು.

Leave a Comment

Your email address will not be published. Required fields are marked *