‘ಶಕ್ತಿ’ ಯೋಜನೆ ಕುರಿತು ಸಿಎಂ ಸಿದ್ದರಾಮಯ್ಯರಿಂದ ಪ್ರಮುಖ ಮಾಹಿತಿ

ಸಮಗ್ರ ನ್ಯೂಸ್: ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Ad Widget ... ..

ಶಕ್ತಿ ಯೋಜನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಕುರಿತು ಟ್ವೀಟರ್ ನಲ್ಲಿ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು,ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ.

Ad Widget

ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಹೇಳಿದ್ದಾರೆ.

ಈ ನಡುವೆ ಶಕ್ತಿ ಯೋಜನೆ ಸ್ಥಗಿತ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ, ಶಕ್ತಿ ಯೋಜನೆ ಸ್ಥಗಿತವಾಗಲ್ಲ. ಮುಂದುವರೆಯುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

Leave a Comment

Your email address will not be published. Required fields are marked *