ವಿಚ್ಛೇದನ ಪಡೆದುಕೊಂಡ ಬಿಗ್ ಬಾಸ್ ಸ್ಪರ್ಧಿ ‘ಕಿರಿಕ್ ಕೀರ್ತಿ’| ಮುರಿದು ಬಿತ್ತು ದಾಂಪತ್ಯ

ಸಮಗ್ರ ನ್ಯೂಸ್: ‘ಬಿಗ್ ಬಾಸ್’ ಸೀಸನ್ 4, ‘ಜೋಡಿ ನಂಬರ್ 1’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ನಟ ಹಾಗೂ ನಿರೂಪಕ ಕಿರಿಕ್ ಕೀರ್ತಿ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.

Ad Widget ... ..

ಈ ಕುರಿತಾಗಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಕೀರ್ತಿ, ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ.

Ad Widget

ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ, ಅಧಿಕೃತವಾಗಿ ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ.

ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ. ಕಹಿ ನೆನಪುಗಳು ಮರೆತು ಹೊಸ ಜೀವನಕ್ಕೆ ನಾಂದಿ ಹಾಡಲಿ. ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರೆಯಲಿ ಎಂದು ಕಿರಿಕ್ ಕೀರ್ತಿ ಪೋಸ್ಟ್ ಹಾಕಿದ್ದಾರೆ.

Leave a Comment

Your email address will not be published. Required fields are marked *