Ad Widget .

‘ಗೃಹಲಕ್ಷ್ಮಿ’ ಯೋಜನೆಗೆ ಆ. 30ರಂದು ಚಾಲನೆ -ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರಿನಲ್ಲಿ ಮಾತನಾಡಿದ ಸಚಿವೆ, ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

Ad Widget . Ad Widget . Ad Widget .

ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ತೆರಳುತ್ತಿರುವ ಅವರು ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವೆ ತಿಳಿಸಿದರು.

Leave a Comment

Your email address will not be published. Required fields are marked *