ಬೆಂಗಳೂರು : ರಾಜ್ಯದ ಜನತೆಗೆ ಮತ್ತೆ ತೊಂದರೆ ನೀಡಲು ಕೆಎಸ್ಆರ್ ಟಿಸಿ ನೌಕರರು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಸಾರಿಗೆ ನೌಕರರು ಲಾಕ್ ಡೌನ್ ಗೂ ಮುನ್ನಾ ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ಸಾರಿಗೆ ಸಂಚಾರ ಸ್ಥಗಿತಗೊಂಡು, ಸಾರ್ವಜನಿಕರಿಗೆ ಬಸ್ ಸಂಚಾರವಿಲ್ಲದೇ ಪರದಾಡುವಂತ ಪರಿಸ್ಥಿತಿ ಎದುರಾಗಿತ್ತು. ಈಗ ಮತ್ತೆ ತಮ್ಮ ಬಾಕಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಇಳಿಯಲಿವೆ ಎನ್ನಲಾಗುತ್ತಿದೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ನೌಕರರ ಬಹುಮುಖ್ಯ ಬೇಡಿಕೆಗಳಲ್ಲಿ ಒಂದಾದಂತ 6ನೇ ವೇತನ ಆಯೋಗ ಜಾರಿಯ ಬೇಡಿಕೆಯನ್ನು ಸರ್ಕಾರ ಲಿಖಿತ ರೂಪದಲ್ಲಿ ಬೇಡಿಕೆ ಈಡೇರಿಸುತ್ತೇವೆ ಎನ್ನುವ ಭರವಸೆಯನ್ನು ಇಲ್ಲಿಯವರೆಗೆ ಈಡೇರಿಸಿಲ್ಲ.
ನೌಕರರ ವಿವಿಧ ಬೇಡಿಕೆ ಈಡೇರಿಕೆ ಕುರಿತಂತೆ ಮತ್ತೆ ಮುಷ್ಕರ ನಡೆಸಬೇಕೋ ಅಥವಾ ಬೇಡವೇ ಎನ್ನುವ ಕುರಿತಂತೆ ಜುಲೈ 1ರಂದು ಸಾರಿಗೆ ನೌಕರರ ಕೂಟದಿಂದ ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿದ ಅವರು, ಸಾರಿಗೆ ನೌಕರರನ್ನು ಮುಷ್ಕರದ ಕಾರಣದಿಂದ ವರ್ಗಾವಣೆ ಮಾಡಿ, ಕೆಲ ನೌಕರರ ಮೇಲೆ ದೂರು ದಾಖಲಿಸಿ, ಈ ಎಲ್ಲಾ ವಿಷಯಗಳ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಇಂತಹ ವರ್ಗಾವಣೆ, ದೂರನ್ನು ವಾಪಾಸ್ ಪಡೆಯುವಂತೆಯೂ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ. ಒಂದು ವೇಳೆ ಒಪ್ಪದೇ ಇದ್ದರೇ, ಮುಷ್ಕರ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.