ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ| ಇಬ್ಬರು ಆರೋಪಿಗಳಿಗೆ ಜಾಮೀನು

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಜನರನ್ನು ಬೆಚ್ಚಿ ಬೀಳಿಸಿದ್ದ ಸುರತ್ಕಲ್ ನ ಮಂಗಳ ಪೇಟೆ ನಿವಾಸಿ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾದ ಬಗ್ಗೆ ವರದಿಯಾಗಿದೆ.

Ad Widget ... ..

ಕೊಲೆ ಪ್ರಕರಣದ ಏಳು ಮಂದಿ ಆರೋಪಿಗಳಲ್ಲಿ ಇಬ್ಬರಾದ ಅಜಿತ್ ಕ್ರಾಸ್ತಾ ಮತ್ತು ಶ್ರೀನಿವಾಸ್ ಗೆ ಜಾಮೀನು ನೀಡಲಾಗಿದೆ.

Ad Widget

ಕಳೆದ ವರ್ಷ ಜುಲೈ 28 ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್ ನಲ್ಲಿ ಫಾಝಿಲ್ ನ ಬರ್ಬರ ಹತ್ಯೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದು ಆ ಪೈಕಿ ಹರ್ಷಿತ್‌ ಎಂಬಾತನಿಗೆ ನ್ಯಾಯಾಲಯವು ಸೆ.7, 2022ರಂದು ಜಾಮೀನು ಮಂಜೂರು ಮಾಡಿದ್ದು ಇದೀಗ ಮತ್ತಿಬ್ಬರು ಆರೋಪಿಗಳಿಗೆ ಜಾಮೀನು ನೀಡಿದ್ದು ಇನ್ನು ನಾಲ್ಕು ಮಂದಿ ಆರೋಪಿಗಳು ಬಂಧನದಲ್ಲಿದ್ದಾರೆ.

Leave a Comment

Your email address will not be published. Required fields are marked *