ಸಮಗ್ರ ನ್ಯೂಸ್: ವಿಶ್ವಕಪ್ ಚೆಸ್ ಫೈನಲ್ ಪಂದ್ಯದಲ್ಲಿ 2 ದಶಕಗಳ ಬಳಿಕ ಫೈನಲ್ ಪ್ರವೇಶಿಸಿದ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿಶ್ವ ನಂ.1 ನಾರ್ವೆಯ ಮ್ಯಾಗ್ನಸ್ ಕಾರ್ಲ್ ಸೆನ್ ವಿರುದ್ಧ ಸೋಲು ಕಂಡಿದ್ದಾರೆ.
ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ವಿಶ್ವದ ನಂಬರ್ 1 ಚೆಸ್ ತಾರೆಗೆ ಎಲ್ಲಾ ರೀತಿಯಲ್ಲೂ ಪೈಪೋಟಿ ನೀಡುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಆದರೆ ಟೈಬ್ರೇಕ್ ನಲ್ಲಿ ಮೇಲುಗೈ ಸಾಧಿಸುವ ಮೂಲಕ ಕಾರ್ಲ್ ಸೆನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.
ಗುರುವಾರ ನಡೆದ ಟೈ ಬ್ರೇಕರ್ ಪಂದ್ಯದಲ್ಲಿ ಮೊದಲ ಸೆಟ್ ನಲ್ಲಿ ಹಿನ್ನಡೆ ಅನುಭವಿಸಿದ ಅವರು ಆ ಬಳಿಕದ ಸುತ್ತಿನಲ್ಲಿ ಡ್ರಾ ಸಾಧಿಸಿದರು. ಆದರೆ 1-0 ಮುನ್ನಡೆ ಕಾಯ್ದುಕೊಂಡ ಮ್ಯಾಗ್ನಸ್ ಕಾರ್ಲ್ ಸನ್ ಗೆದ್ದು 6ನೇ ಬಾರಿ ವಿಶ್ವ ಕಿರೀಟ ಗೆದ್ದರು. ಪ್ರಜ್ಞಾನಂದ ಅವರು ವಿಶ್ವನಾಥನ್ ಆನಂದ್ ಬಳಿಕ ಚೆಸ್ ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸಿದ ಕೇವಲ 2ನೇ ಭಾರತೀಯ ಎನಿಸಿಕೊಂಡಿದ್ದಾರೆ.
ಸೋತರೂ ಕೊಟ್ಯಂತರ ಭಾರತೀಯ ಮನಗೆಲ್ಲುವಲ್ಲಿ 18 ವರ್ಷದ ಪಜ್ಞಾನಂದ ಯಶಸ್ವಿಯಾಗಿದ್ದಾರೆ.