ಹವಾಮಾನ ವರದಿ| ದುರ್ಬಲಗೊಂಡ ಮುಂಗಾರು; ಕರಾವಳಿಯಲ್ಲಿ ಚದುರಿದಂತೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಬಿಸಿಲ ಝಳ ಹೆಚ್ಚಾಗಿದೆ, ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Ad Widget

ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಬೆಂಗಳೂರಿನಲ್ಲಿ ಬೆಳಗ್ಗೆ ಸೂರ್ಯ ಕಾಣಿಸಿಕೊಳ್ಳಲಿದ್ದು, ನಂತರದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ, ಸಂಜೆ ವೇಳೆ ಹಗುರ ಮಳೆಯಾಗುವ ನಿರೀಕ್ಷೆ ಇದೆ.

ಎಚ್​ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Leave a Comment

Your email address will not be published. Required fields are marked *