ಉತ್ತರ ಕನ್ನಡ:ಕಾಲು ಜಾರಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಕಾಲು ಜಾರಿ ಬಾವಿಗೆ ಬಿದ್ದು 3 ವರ್ಷದ ಮಗು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹರಿದೇವ ನಗರದಲ್ಲಿ ನಡೆದಿದೆ.

Ad Widget ... ..

ಮನೆಯ ಬಳಿ ಆಟವಾಡುತ್ತಿದ್ದ ಸ್ಥುಥಿ(3), ಗಣಪತಿ ಮೂರ್ತಿ ಎಂದು ಮಣ್ಣನ್ನು ಬಾವಿಯಲ್ಲಿ ಹಾಕಲು ಹೋಗಿದ್ದಾಳೆ. ಈ ವೇಳೆ ಕಾಲು ಜಾರಬಾವಿಗೆವಿ ಬಿದ್ದು ಮೃತಪಟ್ಟಿದ್ದಾಳೆ.

Ad Widget

ಮನೆ ಮುಂದೆ ಆಟವಾಡುತ್ತಿದ್ದ ಮಗು ಕಾಣದೆ ಇದ್ದಾಗ ಗಾಬರಿಗೊಂಡ ಪೋಷಕರು ಸುತ್ತಮುತ್ತ ಹುಡುಕಾಡಿದ್ದಾರೆ. ಆದರೆ, ಎಲ್ಲಿ ಹುಡುಕಿದರೂ ಕಾಣಿಸದೇ ಇದ್ದಾಗ ಬಡಾವಣೆಯ ನಿವಾಸಿಗಳೆಲ್ಲ ಹುಡುಕುತ್ತಾ ಬಾವಿಯೊಳಗೆ ಇಣುಕಿ ನೋಡಿದಾಗ ಬಾವಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.

Leave a Comment

Your email address will not be published. Required fields are marked *