Ad Widget .

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಗಾರ

ಸಮಗ್ರ ನ್ಯೂಸ್: ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಆಶ್ರಯದಲ್ಲಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತು ನಿರ್ವಹಣಾ ಕಾರ್ಯಾಗಾರ ನಡೆಯಿತು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಾಗಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಜಿಲ್ಲಾ ಉಪಾಧ್ಯಕ್ಷೆ ಡಾ.ಅನುರಾಧಾ ಕುರುಂಜಿ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಕಾರ್ಯ ವೈಖರಿ ಬಗ್ಗೆ ಮತ್ತು ಎನ್.ಡಿ.ಅರ್.ಎಫ್ ನ ಹತ್ತನೇ ಬೆಟಾಲಿಯನ್‌ ಟೀಮ್ ಲೀಡರ್ ಅಜಯ್ ಕುಮಾರ್ ಎನ್.ಡಿ.ಆರ್.ಎಫ್ ಕಾರ್ಯ ವೈಖರಿ ಬಗ್ಗೆ ಮಾಹಿತಿ ನೀಡಿದರು.

Ad Widget . Ad Widget . Ad Widget .

ಸಭಾ ಕಾರ್ಯಕ್ರಮದ ಬಳಿಕ ಎನ್.ಡಿ.ಆರ್.ಎಫ್. ನ ದೇವರಾಜ್ ಹಾಗೂ ತಂಡದವರು ವಿವಿಧ ಪ್ರಾತ್ಯಕ್ಷಿಕೆಗಳ ಮೂಲಕ ತರಬೇತಿ ನೀಡಿದರು.

ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಶ್ರೀಧರ್ ಎಂ.ಕೆ, ಅಕಾಡೆಮಿಕ್ ಡೀನ್ ಎಮ್.ಎನ್. ಚಂದ್ರಶೇಖರ್ ಹಾಗೂ ಕಛೇರಿ ಅಧೀಕ್ಷಕ ಶಿವರಾಮ ಕೇರ್ಪಳ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಚಂದ್ರಶೇಖರ ಬಿಳಿನೆಲೆ ಸ್ವಾಗತಿಸಿ, ಸುನಿಲ್ ಕುಮಾರ್ ಎನ್.ಪಿ. ವಂದಿಸಿ, ಶಿಕ್ಷಕ ನಾರಾಯಣ ತೋರಣಗುಂಡಿ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *