ದ.ಕ. ಜಿಲ್ಲೆಯಲ್ಲಿ ಸೆ. ನಿಂದ ಶನಿವಾರ ಪೂರ್ತಿ ತರಗತಿ ನಡೆಸಲು ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಗೆ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಸೆಪ್ಟೆಂಬರ್ ನಿಂದ ಶನಿವಾರ ಪೂರ್ಣ ತರಗತಿ ನಡೆಸಲು ಶಿಕ್ಷಣ ಇಲಾಖೆ ಸೂಚಿಸಿದೆ.

Ad Widget ... ..

ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರ ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.

Ad Widget

ಜುಲೈನಲ್ಲಿ ಸುರಿದ ಅತೀ ಹೆಚ್ಚು ಮಳೆಗೆ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯ ನಿರ್ದೇಶನದಂತೆ ಏಳು ದಿನ ರಜೆ ಸಾರಲಾಗಿತ್ತು. ಅಂದಿನ ರಜೆಗಳನ್ನು ಭರ್ತಿ ಮಾಡಲು 14 ಶನಿವಾರಗಳಂದು ಇಡೀ ದಿನ ತರಗತಿ ನಡೆಸಲು ನಿರ್ಧರಿಸಲಾಗಿದೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *