ಸಮಗ್ರ ನ್ಯೂಸ್: ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವಿಡಿಯೋ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಪ್ರಕರಣ ಬಂಟ್ವಾಳದಲ್ಲಿ ವರದಿಯಾಗಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಜಕ್ರಿಬೆಟ್ಟು ಎಂಬಲ್ಲಿನ ಮನೆಯಲ್ಲಿ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ವ್ಯಕ್ತಿಯೋರ್ವ ಗೋಡೆಯ ಸಂದಿ ಮಧ್ಯೆ ಮೊಬೈಲ್ ನಲ್ಲಿ ಚಿತ್ರಿಕರಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ.
ಇದನ್ನು ಕಂಡ ಯುವತಿ ಜೋರಾಗಿ ಬೊಬ್ಬೆ ಹಾಕಿದ್ದಾಳೆ, ಈ ಸಂದರ್ಭ ಅಪರಿಚಿತ ಆರೋಪಿ ಓಡಿಹೋಗಿದ್ದಾನೆ. ಬಳಿಕ ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.



























