ಪುತ್ತೂರು: ಯುವಕ ನೇಣಿಗೆ ಶರಣು

ಪುತ್ತೂರು: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ನಡೆದಿದೆ.

Ad Widget ... ..

ಇಲ್ಲಿನ ನೆರೋಲ್ತಡ್ಕ ನಿವಾಸಿ 20 ವರ್ಷದ ಯುವಕ ಶರತ್ ಆತ್ಮಹತ್ಯೆ ಮಾಡಿಕೊಂಡವರು. ಇಂದು ಮದ್ಯಾಹ್ನ ಇದ್ದಕ್ಕಿದ್ದಂತೆ ಶರತ್ ಮನೆಯಿಂದ ಕಾಣೆಯಾಗಿದ್ದಾರೆ. ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ರಬ್ಬರ್ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶರತ್ಪ ಮೃತದೇಹ ಪತ್ತೇಯಾಗಿದೆ.

Ad Widget

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈಶ್ವರಮಂಗಲ ಹೊರಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *