ಸಮಗ್ರ ನ್ಯೂಸ್: ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಸೆ. 1ರಂದು ಗಜಪಯಣಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು.
ಈ ಬಾರಿಯೂ ಅಭಿಮನ್ಯು ಆನೆಯೇ ಅಂಬಾರಿ ಹೊರುತ್ತೆ, ಕಂಜನ್ ಈ ಬಾರಿ ದಸಾರಗೆ ಹೊಸ ಆನೆ ಸೇರ್ಪಡೆ ನಿಶಾನೆ ಆನೆಯನ್ನ ಇನ್ನೂ ನಿರ್ಧಾರ ಮಾಡಿಲ್ಲ. ಒಂದೂವರೆ ತಿಂಗಳು ದಸರಾ ಗಜಪಡೆಗಳು ತಾಲೀಮಿನಲ್ಲಿ ಭಾಗಿಯಾಗುತ್ತದೆ. ನಾಡ ಅದಿದೇವತೆ ಚಾಮುಂಡಿ ತಾಯಿಯ ಆಶೀರ್ವಾದ ಎಲ್ಲರ ಮೇಲೆ ಇರಲಿ. ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ ಈ ಬಾರಿ ಅದ್ದೂರಿ ದಸರಾ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದ್ದೂರಿ ದಸರಾ ಆಚರಣೆಗೆ ಸಿಎಂ ಸೂಚನೆ ನೀಡಿದ್ದಾರೆ. 30 ಕೋಟಿ ಅನುದಾನ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಮೊದಲ ಹಂತದಲ್ಲಿ 9 ಆನೆಗಳು ಕಾಡಿನಿಂದ ನಾಡಿಗೆ ಬರುತ್ತಿವೆ. ಇನ್ನೂ 5ಆನೆಗಳು ತದ ನಂತರ ಅರಮನೆಗೆ ಬರುತ್ತದೆ. ಮಾವುತರು ಹಾಗೂ ಕಾವಾಡಿಗರಿಗೆ ಪ್ರೋತ್ಸಾಹ ನೀಡುತ್ತೇವೆ. ಧಾರ್ಮಿಕ ವಿಚಾರ, ರಾಜ್ಯಡಳಿತವನ್ನ ಸಂರಕ್ಷಣೆ ಮಾಡುವ ದೃಷ್ಟಿಯಿಂದ ಈ ಭಾರಿ ದಸರಾ ಆಚರಣೆ ಮಾಡುತ್ತೇವೆ. ವೀರನ ಹೊಸಹಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಎಚ್.ಸಿ ಮಹದೇವಪ್ಪ ಹೇಳಿದರು.