ಹವಾಮಾನ ವರದಿ| ಸೆ.8ರವರೆಗೆ ರಾಜ್ಯಾದ್ಯಂತ ಮಳೆ ಸಾಧ್ಯತೆ| ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದ್ದು, ಇಂದಿನಿಂದ ಸೆಪ್ಟೆಂಬರ್ 8 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Ad Widget

ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಸೆಪ್ಟಂಬರ್ 3 ಮತ್ತು 4ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *