ಸಮಗ್ರ ನ್ಯೂಸ್: ರಾಜ್ಯದ ಮಲ್ಪೆಯ ಬಂದರಿನಲ್ಲಿ ಕಣ್ಣಿ ಕೆಲಸ ಮಾಡಿಕೊಂಡು, ಬಿಡುವಿದ್ದಾಗ ಅಭ್ಯಾಸ ಮಾಡಿಕೊಂಡು, ಕರಾವಳಿಗೆ ತೀರಾ ಅಪರಿಚಿತ ಕ್ರೀಡೆಯಾಗಿರವ ಬಾಕ್ಸಿಂಗ್‌ನಲ್ಲಿ ಯಶಸ್ಸುಕಂಡ ಬಾಕ್ಸಿಂಗ್ ಚಾಂಪಿಯನ್ ವಿರಾಜ್ ಮೆಂಡನ್ ಈಗ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಾಕ್ಸಿಂಗ್ ಕ್ಷೇತ್ರದಲ್ಲಿ ಅನೇಕ ಸ್ಪರ್ದೆಗಳಲ್ಲಿ ಪ್ರತಿನಿಧಿಸಿದ್ದ ವಿರಾಜ್ ಮೆಂಡನ್ ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದರೂ, ಮೂಲ ವೃತ್ತಿಯಾಗಿ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಆದರೆ, ಈಗ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ದೇಶದ ವಿವಿಧೆಡೆ ನಡೆಯುತ್ತಿದ್ದ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ವಿರಾಜ್ ಮೆಂಡನ್ ಚಿನ್ನದ ಪದಕವನ್ನು ಗೆದ್ದು ರಾಜ್ಯಕ್ಕೆ ಹಾಗೂ ಕರಾವಳಿ ಜಿಲ್ಲೆ ಉಡುಪಿಗೆ ಕೀರ್ತಿ ತಂದಿದ್ದರು. ಆದರೆ, ಈಗ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯ ಕೊಠಡಿಯಲ್ಲಿ ನೇಣು ಬಿಗಿದು ವಿರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಒಟ್ಟು 21 ಪದಕಗಳನ್ನು ವಿರಾಜ್ ಮೆಂಡನ್ ಗೆದ್ದಿದ್ದಾರೆ. ಅದರಲ್ಲಿ 14 ಚಿನ್ನದ ಪದಕ ಸೇರಿರುವುದು ವಿಶೇಷ. ಮಲ್ಪೆಯ ಬಂದರಿನಲ್ಲಿ ಕಣ್ಣಿ ಕೆಲಸ ಮಾಡಿಕೊಂಡು ಈ ರೀತಿ ಸಾಧನೆ ಮಾಡಿರುವ ವಿರಾಜ್ ಅವರ ಸಾಧನೆಯನ್ನು ಮೊಗವೀರ ಸಮುದಾಯ ಗುರುತಿಸದಿರುವುದು ಬೇಸರದ ಸಂಗತಿ ಎಂದು ಸ್ಥಳೀಯರು ಹೇಳಿದ್ದಾರೆ.
ಬೆಳಿಗ್ಗೆ 2.45ಕ್ಕೆ ಎದ್ದು ಮಲ್ಪೆಯ ಬಂದರಿನಲ್ಲಿ ಮೀನುಗಾರಿಕೆಯ ಕಣ್ಣಿ ಕೆಲಸ ಮಾಡುತ್ತೇನೆ. ವಾರದಲ್ಲಿ ನಾಲ್ಕು ದಿನ ಅಭ್ಯಾಸ. ವಿಶೇಷವಾದ ಯಾವುದೇ ಡಯಟ್ ಇಲ್ಲ. ನಾಲ್ಕು ಪ್ರೋ ಬಾಕ್ಸಿಂಗ್‌ನಲ್ಲಿ ಮೂರು ಬಾರಿ ನಾಕೌಟ್ ಮೂಲಕ ಅಗ್ರ ಸ್ಥಾನ ಗಳಿಸಿರುವೆ ಎಂದು ವಿರಾಜ್ ಹೇಳಿಕೊಂಡಿದ್ದರು.