ಸಮಗ್ರ ನ್ಯೂಸ್: ರಾಹುಲ್ ಗಾಂಧಿಯವರ ಐತಿಹಾಸಿಕ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಗಿ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ರಾಮನಗರದಲ್ಲಿ ಸೆ.7ರಂದು ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ.
ಅದರ ನಂತರ ಸೆ.11ರ ಮುಂಚಿತವಾಗಿ ಪ್ರತಿ ಜಿಲ್ಲೆಯಲ್ಲಿ 1 ಗಂಟೆ ಪಾದಯಾತ್ರೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ದ.ಕ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ನಡೆಸಬೇಕು.
ಪ್ರತೀ ಬಾರಿ ಜಿಲ್ಲಾ ಕೇಂದ್ರದಲ್ಲಿ ನಡೆಸುವುದರಿಂದ ಸುಳ್ಯದಂತ ಹಿಂದುಳಿದ ಪ್ರದೇಶದಲ್ಲಿ ಪಕ್ಷ ಸಂಘಟನೆಗೆ ತೊಡಕಾಗುತ್ತದೆ. ಸುಳ್ಯದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಷ್ಕ್ರಿಯವಾಗಿದೆ. ಆದುದರಿಂದ ಸುಳ್ಯದಲ್ಲಿ ಕಾರ್ಯಕರ್ತರಿಗೆ ಸಂಗಟನಾತ್ಮಕವಾಗಿ ಹೊಸ ಹುಮ್ಮಸ್ಸು ನೀಡಲು ಈ ಭಾರತ್ ಜೋಡೋ ನೆನಪಿಗಾಗಿ ನಡೆಯುವ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಸುಳ್ಯದಲ್ಲಿ ನಡೆಸಬೇಕು. ಸುಳ್ಯದವರೇ ಆದ ಜಿಲ್ಲಾ ಉಪಾಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳು ಇದ್ದಾರೆ ಅವರ ನೇತೃತ್ವದಲ್ಲಿ ನಡೆಯಲಿ ಎಂದು ಸುಳ್ಯದ ಕಾಂಗ್ರೆಸ್ ಮುಖಂಡರಾದ ಮಹೇಶ್ ಕುಮಾರ್ ಕರಿಕ್ಕಳ, ಕೆ.ಗೋಕುಲ್ ದಾಸ್ ಸುಳ್ಯ, ಭವಾನಿಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ದೆ, ಶಶಿಧರ್ ಎಂ ಜೆ, ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.