ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಸಮುದ್ರದ ವಾಯವ್ಯ ಮತ್ತು ಪಶ್ಚಿಮ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಕುರಿತು ಭಾರತೀಯ ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಈ ವಾಯುಭಾರ ಕುಸಿತವು ಕರ್ನಾಟಕದ ಮೇಲೆ ಭಾರಿ ಮಳೆ ಸುರಿಸಲಿದೆ. ವಾಯುಭಾರ ಕುಸಿತದ ಸ್ಥಳದಲ್ಲಿ ಸಮುದ್ರ ಮೇಲ್ಮೈನಲ್ಲಿ 7.6 ಕೀಲೋ ಮಿಟರ್ ಎತ್ತರದಲ್ಲಿ ಸುಳಿಗಾಳಿಯೊಂದು ಸೃಷ್ಟಿಯಾಗಿದೆ. ಇದು ದಕ್ಷಿಣಕ್ಕೆ ಓರೆಯಾಗಿದ್ದು, ಅದೇ ಮಾರ್ಗವಾಗಿ ದಟ್ಟಗಾಳಿ ಬೀಸುವ ಸಾಧ್ಯೆತೆಗಳು ಇದೆ.
ವಾಯುಭಾರ ಕುಸಿತ ಪ್ರಭಾವ ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳ ಮೇಲೆ ಹೆಚ್ಚಿರುತ್ತದೆ. ಈ ಕಾರಣದಿಂದ ಸೆಪ್ಟಂಬರ್ 6 ಮತ್ತು 7ರಂದು ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಅತ್ಯಧಿಕ ಮಳೆ ಬರಲಿದ್ದು, ಅವುಗಳಿಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ.
ಇದೇ ಭಾಗದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ. ನಂತರ ಎರಡು ದಿನ ತುಂತುರು ಮಳೆ ಆಗಲಿದೆ. ಇದರೊಂದಿಗೆ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟಂಬರ್ 9 ಮತ್ತು 10 ರಂದು ವ್ಯಾಪಕ ಮಳೆ ಬರಲಿದ್ದು, ಈ ಎರಡು ದಿನ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ಮುಂದಿನ ನಾಲ್ಕೈದು ಹಗುರ ಮಳೆ ಕೆಲವು ಕಡೆಗಳಲ್ಲಿ ಮಾತ್ರ ಜೋರು ಮಳೆ ಆಗುವ ಲಕ್ಷಣಗಳು ಇವೆ ಎಂದು ಅವರು ಮಾಹಿತಿ ನೀಡಿದ್ದಾರೆ. ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಕಡಿಮೆಯಾಗಿ ಚಳಿ-ಮಳೆ ವಾತಾವರಣ ಹೆಚ್ಚಿರಲಿದೆ ಎಂದು ತಿಳಿದು ಬಂದಿದೆ.