ಸುಳ್ಯ: ಮಸೂದ್ ಕೊಲೆ ಪ್ರಕರಣ; ಮತ್ತೆ ಮೂವರಿಗೆ ಜಾಮೀನು

ಸಮಗ್ರ ನ್ಯೂಸ್: ಕಳೆದ ವರ್ಷ ಸುಳ್ಯದ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

Ad Widget ... ..

ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು‌.

Ad Widget

ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿಸಿದ್ದರು. ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಮೂರು ಜನ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.

Leave a Comment

Your email address will not be published. Required fields are marked *