ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಂಜು | ದಾರಿ ಕಾಣದೆ ಎರಡು ಅಪಘಾತ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಂಜು ಕವಿದಿದ್ದು ವಾಹನ ಸಂಚಾರಿಸಲಾಗದೆ ಸೆ.8 ರಂದು ಸಂಜೆ ಎರಡು ಅಪಘಾತಗಳು ಸಂಭವಿಸಿವೆ.

Ad Widget ... ..

22 ಕಿ.ಮೀ. ವ್ಯಾಪ್ತಿಯ ಕೊಟ್ಟಿಗೆಹಾರ-ಚಾರ್ಮಾಡಿ ಮಾರ್ಗದಲ್ಲಿ ಬಿದಿರುತಳ ಗ್ರಾಮದ ಬಸ್ ನಿಲ್ದಾಣದ ಬಳಿ ಮಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನವೊಂದು ದಟ್ಟ ಮಂಜಿನಲ್ಲಿ ಸರಿಯಾಗಿ ದಾರಿ ಕಾಣದೆ ರಸ್ತೆಯ ಒಂದು ಬದಿಯ ಪ್ರಪಾತಕ್ಕೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆಗೆ ಡಿಕ್ಕಿಯೊಡೆದು ಪಲ್ಟಿಯಾಗಿದ್ದು,
ಅದೃಷ್ಟವಶಾತ್ ಭಾರೀ ಅನಾಹುತದಿಂದ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ad Widget

ಮತ್ತೊಂದು ಅಪಘಾತ ಅಣ್ಣಪ್ಪಸ್ವಾಮಿ ದೇಗುಲದ ಸಮೀಪದ ಕಿರಿದಾದ ರಸ್ತೆಯಲ್ಲಿ ದಟ್ಟ ಮಂಜು ಕವಿದಿದ್ದ ಕಾರಣ ದಾರಿ ಕಾಣದೆ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಸರ್ಕಾರಿ ಬಸ್ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಮುಗಿಸಿ ಧಾರವಾಡಕ್ಕೆ ಹೊರಟಿದ್ದ ಬೊಲೆರೋ ಕಾರು ಅತಿಯಾದ ತಿರುವಿನ ಕಿರಿ ರಸ್ತೆಯಲ್ಲಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯೊಡೆದಿದ್ದು ತಡೆಗೋಡೆಯೇ ಕುಸಿದು ಬಿದ್ದಿದೆ. ಕಾರು ಹಾಗೂ ಬಸ್ಸಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಈ ಸಣ್ಣ ಕಿರು ರಸ್ತೆಯಲ್ಲಿ ಸಾವಿರಾರು ಅಡಿ ಪ್ರಪಾತವಿದ್ದು, ಸ್ವಲ್ಪ ಹೆಚ್ಚು-ಕಡಿಮೆಯಾಗಿದ್ದರೂ ಬಸ್ ಹಾಗೂ ಕಾರು ಎರಡು ಪ್ರಪಾತಕ್ಕೆ ಬೀಳುತ್ತಿತ್ತು.

ಆದರೆ, ಬಹುದೊಡ್ಡ ಅನಾಹುತವೊಂದು ಜಸ್ಟ್ ಮಿಸ್ ಆದಂತಾಗಿದೆ. ಚಾರ್ಮಾಡಿ ಘಾಟಿಯ ಈ ರಸ್ತೆಯಲ್ಲಿ ಈ ಕಿರು ರಸ್ತೆ ಅಂದಿನಿಂದಲೂ ಇದೆ. ಹೆದ್ದಾರಿ ಪ್ರಾಧಿಕಾರ ಈ ಚಿಕ್ಕ ರಸ್ತೆಯನ್ನು ಅಗಲ ಮಾಡಬೇಕೆಂದು ಸ್ಥಳಿಯರು ಮನವಿ ಮಾಡಿದ್ದರು. ಆದರೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕ್ರಮ ಕೈಗೊಳ್ಳದ ಕಾರಣ ಇಂದು ಈ ಅನಾಹುತ ಸಂಭವಿಸಿದೆ ಎಂದು ಸ್ಥಳಿಯರು ಪ್ರಾಧಿಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಈಗ ಘಾಟಿಯಲ್ಲಿ ಭಾರೀ ಮಂಜು ಕವಿದಿದೆ. ತಡೆಗೋಡೆ ಬೇರೆ ಕುಸಿದಿದೆ. ರಸ್ತೆಯೂ ಕಿರಿದಾದ ರಸ್ತೆ. ಮತ್ತೊಂದು ಅನಾಹುತ ಸಂಭವಿಸೋ ಮೊದಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೂ ರಸ್ತೆಗೊಂದು ಬಂದೋಬಸ್ತ್ ಕಲ್ಪಿಸಿ ಶೀಘ್ರದಲ್ಲೇ ತಡೆಗೋಡೆ ನಿರ್ಮಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.ಮಳೆ ಜೊತೆ ದಟ್ಟ ಮಂಜು ಕವಿದಿದ್ದು ವಾಹನ ಸವಾರರು ಪಾರ್ಕಿಂಗ್ ಲೈಟ್, ಹೆಡ್‍ಲೈಟ್, ಫಾಗ್ ಲೈಟ್ ಹಾಕಿಕೊಂಡು ಹೋದರು ವಾಹನ ಸಂಚಾರ ದುಸ್ತರವಾಗುವಂತಹಾ ಸ್ಥಿತಿ ನಿರ್ಮಾಣವಾಗಿದೆ.

Leave a Comment

Your email address will not be published. Required fields are marked *