ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹೊಸದಿಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ನಿವೃತ್ತ ಸಹ ಪ್ರಾಧ್ಯಾಪಕ, ಸಂಶೋಧಕ, ಲೇಖಕ ಹಾಗೂ ಜನಕಲಾ ಸಂಘಟಕ ಡಾ.ಶಂಸುಲ್ ಇಸ್ಲಾಂ ಅವರು ‘ಮೊದಲ ಸ್ವಾತಂತ್ರ್ಯ ಸಂಗ್ರಾಮ, 1857 – ಜಂಟಿ ಬಲಿದಾನಗಳು, ಜಂಟಿ ವಾರಿಸುದಾರಿಕೆ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಲು ಆಗಮಿಸಿದ್ದು, ಎಬಿವಿಪಿ ಕಾರ್ಯಕರ್ತರು ‘ಗೋಬ್ಯಾಕ್ ಶಂಸುಲ್’ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ಶಂಸುಲ್ ಇಸ್ಲಾಂ ಉಪನ್ಯಾಸ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.