ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರಕಾರದಿಂದ ಸ್ಪರ್ಧಾತ್ಮಕ ಪರೀಕ್ಷಾ ಉಚಿತ ತರಬೇತಿ

ಸಮಗ್ರ ನ್ಯೂಸ್: ಸರಕಾರವು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ವಸತಿ ಸಹಿತ ಐಎಎಸ್, ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು,ಕೂಡಲೇ 2023-24 ನೇ ಸಾಲಿನಲ್ಲಿ ಉಚಿತವಾಗಿ ತರಬೇತಿ ಪಡೆಯಬಹುದಾಗಿದೆ. ಈ ಸದಾವಕಾಶವನ್ನು ಸದುಪಯೋಗಪಡಿಸಲು ಇಲ್ಲಿದೆ ಪೂರ್ಣ ಮಾಹಿತಿ

Ad Widget . Ad Widget . Ad Widget . Ad Widget . Ad Widget .

ಇದು ೧೦ ತಿಂಗಳ ತರಬೇತಿ ಆಗಿದ್ದು, ೨೦೨೩-೨೪ನೇ ಸಾಲಿನಲ್ಲಿ ಬೆಂಗಳೂರಿನ ಕರ್ನಾಟಕ ಹಜ್‌ ಭವನದಲ್ಲಿ ನಡೆಯಲಿರುವ ಐಎಎಸ್‌, ಕೆಎಎಸ್‌ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಗೆ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿಧ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

Ad Widget . Ad Widget .

ಅರ್ಜಿ ಸಲ್ಲಿಸುವವರು ಕನಿಷ್ಠ ಪದವಿ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು. ಹಾಗೂ ವಯಸ್ಸು ಕನಿಷ್ಠ 21 ರಿಂದ 35 ಮೀರಿರಬಾರದು. ಅರ್ಜಿಯನ್ನು ಅಭ್ಯರ್ಥಿಗಳು ಸೇವಾ ಸಿಂಧು https://sevasindhuservices.karnataka.gov.in/ ವೆಬ್‌ಸೈಟ್‌ ಮೂಲಕ ಸಲ್ಲಿಸಬಹುದಾಗಿದೆ. ಸೆಪ್ಟಂಬರ್‌ 16 ರ ಮೊದಲು ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ 8722299990 ಗೆ ಕರೆ ಮಾಡಿ.

Leave a Comment

Your email address will not be published. Required fields are marked *