ಉಳ್ಳಾಲ: ಸರಣಿ ಅಪಘಾತ| ಮೂರು ವಾಹನಗಳು ಜಖಂ

ಸಮಗ್ರ ನ್ಯೂಸ್: ಮಿನಿ ಲಾರಿ, ಕಾರು, ಬಸ್ಸಿನ ನಡುವೆ ಸರಣಿ ಅಪಘಾತವಾದ ಸಂಭವಿಸಿದ ಘಟನೆ ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ನಡೆದಿದೆ.

Ad Widget ... ..

ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ಹಠಾತ್ ಬ್ರೇಕ್ ಹಾಕಿದ ಕಾರಿಗೆ ಕೇರಳ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಮುಂದೆ ಇದ್ದ ಮಿನಿ ಲಾರಿ ನಡುವೆ ಕಾರು ಅಪ್ಪಚ್ಚಿಯಾಗಿದೆ.

Ad Widget

ಇನ್ನು ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ ದಿನೇಶ್ ಕಾರಿನಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಅಪ್ಪಚ್ಚಿಯಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ವ್ಯಾಗನಾರ್ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಆತ ಪವಾಡದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಎಲ್ಲಾ ವಾಹನಗಳಲ್ಲಿದ್ದ ಐದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Leave a Comment

Your email address will not be published. Required fields are marked *