ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ| ಮಧ್ಯಂತರ ಅರ್ಜಿ ವಜಾ

ಸಮಗ್ರ ನ್ಯೂಸ್: ಜೆಡಿಎಸ್‌ನ ಪ್ರಜ್ವಲ್‌ ರೇವಣ್ಣ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಪ್ರಜ್ವಲ್​​​​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಈ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಪ್ರಜ್ವಲ್ ರೇವಣ್ಣ ಅವರನ್ನು ಹಾಸನ ಸಂಸದ ಸ್ಥಾನದಿಂದ ಅನರ್ಹ‌ಮಾಡಿ ಹೈಕೋರ್ಟ್ ಆದೇಶ ಮಾಡಿತ್ತು.

Ad Widget ... ..

ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವವರೆಗೆ ಈ ಆದೇಶಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಇಂದು ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ.

Ad Widget

ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಎಚ್​​​ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್ 1 ರಂದು ಹೈಕೋರ್ಟ್ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದು, ಅವರು ಹೊಂದಿರುವ ಆಸ್ತಿಗಳ ನೈಜ ಮೌಲ್ಯವನ್ನು ಮರೆಮಾಚಲಾಗಿದೆ ಎಂದು ಆರೋಪಿಸಲಾಗಿದೆ.

Leave a Comment

Your email address will not be published. Required fields are marked *